allwyn_110518_sanjeeva1

ಬಂಟ್ವಾಳಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಸಜಿಪಮೂಡ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಸಚಿವ ರಮಾನಾಥ್ ರೈ‌ ಆಪ್ತ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಸದಸ್ಯರಾಗಿರುವ ಸಂಜೀವ ಪೂಜಾರಿಯ ಮನೆ ಮೇಲೆ ಗುರುವಾರ ತಡ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ರಮಾನಾಥ ರೈ ಆಪ್ತರ ಮನೆ ಮೇಲೆ ಐಟಿ ದಾಳಿ ಕೂಡ ನಡೆದಿತ್ತು. ಇದೀಗ ರೈ ಆಪ್ತ ಸಂಜೀವ ಪೂಜಾರಿ ಮತ್ತು ಅವರ ಪತ್ನಿ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಮಾತ್ರವಲ್ಲ, ಸಂಜೀವ ಪೂಜಾರಿ ಅವರ ಮನೆಯ ಸಾಮಾಗ್ರಿಗಳು ಮತ್ತು ಬಿಎಂಡಬ್ಲ್ಯೂ ಕಾರನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ಘಟನೆಯನ್ನು ತಡೆಯಲು ಬಂದ ಮೂವರ ಮೇಲೆಯೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಸಚಿವ ರಮಾನಾಥ ರೈ ವಿರೋಧಿಗಳು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದು, ಇದೀಗ ಘಟನೆಗೆ ರಾಜಕೀಯ ಬಣ್ಣ ಹಚ್ಚಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

allwyn_110518_sanjeeva2

By suddi9

Leave a Reply

Your email address will not be published. Required fields are marked *