file702ex39byr5k3oxhe0p

ಮಂಗಳೂರು: ಜಿಲ್ಲೆಯಲ್ಲಿ ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು. ನೀವು ಕಾನೂನು ಕೈಗೆ ತೆಗೆದುಕೊಂಡರೆ ನಾವು ಸುಮ್ಮನೆ ಕೂರುವುದಿಲ್ಲ. ಏನೇ ದೂರುಗಳಿದ್ದರೂ ಚುನಾವಣಾಧಿಕಾರಿ ಅಥವಾ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿ ಎಂದು ದಕ್ಷಿಣ ಕನ್ನಡ ಎಸ್ಪಿ ರವಿಕಾಂತೇಗೌಡ ತಿಳಿಸಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ಸ್ವತಃ ಪಕ್ಷದ ಕಾರ್ಯಕರ್ತರೇ ಇಳಿದು ಕಾರ್ಯಾಚರಣೆ ಮಾಡಿದರೆ ಅದು ಅಪರಾಧದ ಹಂತ ತಲುಪುತ್ತದೆ. ಏನೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತನ್ನಿ. ಯಾವುದೇ ಕಾರಣಕ್ಕೂ ಕಾನೂನು ಕೈಗೆತ್ತಿಕೊಳ್ಳಬೇಡಿ. ಶಾಂತಿ ಕಾಪಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

By Suddi9

Leave a Reply

Your email address will not be published. Required fields are marked *