ಬೀದರ್: ಬೀದರ್ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಶೋಕ್ ಖೇಣಿ ಅವರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಪರಿಶೀಲಿಸಿದ್ದಾರೆ.
ಮನೆಯಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸಲಾಗಿದೆ ಎಂಬ ಮಾಹಿತಿಯನ್ನು ಆಧರಿಸಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ ಮತ್ತು ಸಿಇಒ ಡಾ. ಸೆಲ್ವಮಣಿ ನೇತೃತ್ವದಲ್ಲಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೀದರ್ ನಗರದ ರಾಂಪುರೇ ನಗರದಲ್ಲಿರುವ ಅಶೋಕ್ ಖೇಣಿ ಮನೆ ದಾಳಿ ನಡೆಸಲಾಗಿದ್ದು ಹಲವು ಗಂಟೆಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

