cong 154

ಮಂಗಳೂರು: ಚುನಾವಣಾ ಫಲಿತಾಂಶದ ಮೊದಲೇ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೋ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ನಗರದ ಮಥಾಯಸ್ ಪಾರ್ಕ್ ಬಳಿಯೂ ತಡರಾತ್ರಿ ಕಾಂಗ್ರೆಸ್ ಸದಸ್ಯರು ಸಂಭ್ರಮ ಆಚರಣೆ ಮಾಡಿದ್ದರು. ಇದೀಗ ಮತ್ತೇ ಯುವ ಕಾಂಗ್ರೆಸ್ ಸದಸ್ಯರು ಮಂಗಳೂರಿನ ಫಳ್ನೀರ್ ಮಿಲಾಗ್ರಿಸ್ ವಾರ್ಡ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‍ ಅಭ್ಯರ್ಥಿ ಜೆ.ಆರ್.ಲೋಬೋ, ಬಿಜೆಪಿಯಿಂದ ವೇದವ್ಯಾಸ ಕಾಮತ್ ಮತ್ತು ಜೆಡಿಎಸ್ ಪಕ್ಷದಿಂದ ರತ್ನಾಕರ ಸುವರ್ಣ ಕಣದಲ್ಲಿದ್ದಾರೆ.

ಇಂದು ಕರ್ನಾಟಕ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರ ಬೀಳಲಿದ್ದು, ಈಗಾಗಲೇ ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಬೆಳಗ್ಗೆ 7ಗಂಟೆಯಿಂದಲೇ ಮತ ಎಣಿಕೆ ಆರಂಭವಾಗಿದೆ.

By suddi9

Leave a Reply

Your email address will not be published. Required fields are marked *