ಬೆಳಗಾವಿ: ವಿಧಾನಸಭಾ ಉಪಚುನಾವಣಾ ಮತಎಣೆಕೆ ಕಾರ್ಯ ಮುಕ್ತಾಯವಾಗಿದ್ದು, ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಭರ್ಜಯ ಜಯ ಸಾಧಿಸಿದೆ.
ಕಾಂಗ್ರೆಸ್ ಪಕ್ಷದ ಗಣೇಶ್ ಹುಕ್ಕೇರಿ ಅವರು ಒಟ್ಟು 28,100 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಎಲ್ಲ 18 ಸುತ್ತಿನ ಮತಎಣಿಕೆ ಕಾರ್ಯ ಮುಗಿದಿದ್ದು, ಬಿಜೆಪಿಯ ಮಹಾಂತೇಶ ಕವಾಟಗಿಮಠ ಅವರು ತೀವ್ರ ಮುಖಭಂಗ ಅನುಭವಿಸಿದ್ದಾರೆ.