Siddaramaiah

ಮೈಸೂರು: ಅಂಚೆ ಮತ ಎಣಿಕೆ ಆರಂಭವಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿನ್ನಡೆ ಅನುಭವಿಸಿದ್ದಾರೆ.

ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಸಿದ್ದರಾಮಯ್ಯ ಅವರಿಗೆ 8440 ಮತಗಳ ಹಿನ್ನಡೆ ಉಂಟಾಗಿದೆ. ಜಿಟಿ ದೇವೇಗೌಡ ಅವರು ಮುನ್ನಡೆ ಸಾಧಿಸಿದ್ದಾರೆ.

ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಅವರ ಎದುರಾಳಿ ಜೆಡಿಎಸ್‌ನ ಜಿಟಿ ದೇವೇಗೌಡ ಅವರು ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.

By suddi9

Leave a Reply

Your email address will not be published. Required fields are marked *