ಶಿವಮೊಗ್ಗ: ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಬಿ.ಪ್ರಸನ್ನ ಕುಮಾರ್ ಅವರು ಕ್ಷೇತ್ರದಲ್ಲಿ ಅವರ ಎದುರಾಳಿ.
ಕೆ.ಎಸ್.ಈಶ್ವರಪ್ಪ ಅವರು 5778 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಬಿ.ಪ್ರಸನ್ನ ಕುಮಾರ್ ಅವರು 2614 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಬಿ.ಪ್ರಸನ್ನ ಕುಮಾರ್, ಜೆಡಿಎಸ್ನ ನಿರಂಜನ್ ಕುಮಾರ್ ಅವರು ಕ್ಷೇತ್ರದಲ್ಲಿ ಎದುರಾಳಿಗಳು.
2013ರ ಚುನಾವಣೆಯಲ್ಲಿ ಶಿವಮೊಗ್ಗ ನಗರದ ಕ್ಷೇತ್ರದಲ್ಲಿ ಈಶ್ವರಪ್ಪ ಅವರು ಸೋಲು ಕಂಡಿದ್ದರು. ಕಾಂಗ್ರೆಸ್ನ ಕೆ.ಬಿ.ಪ್ರಸನ್ನ ಕುಮಾರ್ ಅವರು ಗೆಲುವು ಸಾಧಿಸಿದ್ದರು.

