ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯದಲ್ಲಿ ಶಾಸಕ ಎಸ್.ಅಂಗಾರ ಈ ಬಾರಿಯೂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿಯೂ ಮತದಾರರು ಅಂಗಾರ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ವಿರುದ್ಧ ಎಸ್.ಅಂಗಾರ ಈ ಬಾರಿ ಸ್ಪರ್ಧಿಸಿದ್ದು, 13,915ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ.