ಪುತ್ತೂರು: ಬಿಜೆಪಿಯ ಪ್ರಯೋಗ ಶಾಲೆ ಎಂದೇ ಕರೆಯಲಾಗುತ್ತಿರುವ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ಇದೀಗ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಸಂಜೀವ ಮಠಂದೂರು ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ವಿರುದ್ಧ ಸಂಜೀವ ಮಠಂದೂರು ಈ ಬಾರಿ ಸ್ಪರ್ಧಿಸಿದ್ದು, 12973 ಮತಗಳ ಅಂತರದಿಂದ ಗೆದ್ದು ವಿಜಯ ಸಾಧಿಸಿದ್ದಾರೆ.

