ಬೆಂಗಳೂರು: 2018 ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ನಡೆಸುವ ಕನಸು ಭಗ್ನವಾಗ ತೊಡಗಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸಿನ ಸಿದ್ದರಾಮಯ್ಯ ಅವರು ಇಂದು ಸಂಜೆ ರಾಜ್ಯಪಾಲರ್ನನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ರಾಜ್ಯದ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಅವರು 1977 ಡಿ.31ರಂದು ಮುಖ್ಯಮಂತ್ರಿಯಾಗಿ ಐದು ವರ್ಷ 286ದಿನಗಳ ನಿರಂತರವಾಗಿ ಏಕಕಾಲದಲ್ಲಿ ಪೂರ್ಣಗೊಳಿಸಿದ್ದರು. ಆ ನಂತರ ಬಂದಂತಹ ಯಾವ ಮುಖ್ಯಮಂತ್ರಿಗಳು ಕೂಡ ಸುದೀರ್ಘ ಐದು ವರ್ಷ ಅಧಿಕಾರ ಅನುಭವಿಸಲಿಲ್ಲ. ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರೈಸಿ ಸಿ.ಎಂ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ.

