789276419973d8544d98530c04986a78

ಬಾಗಲಕೋಟೆ: ಇಳಕಲ್ ನ ವಿಜಯ ಮಹಾಂತೇಶ ಪೀಠದ ಶ್ರೀ ಮಹಾಂತ ಶಿವಯೋಗಿ ಸ್ವಾಮೀಜಿ ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

‘ಮಹಾಂತ ಜೋಳಿಗೆಯ ಹರಿಕಾರ’ ಎಂದೇ ಖ್ಯಾತರಾಗಿದ್ದ ಮಹಾಂತ ಶ್ರೀ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಬೆಳಗಾವಿಯ ಕೆಎಲ್​ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶ್ರೀಗಳ ಪಾರ್ಥಿವ ಶರೀರ ಇಂದು ಸಂಜೆ 6 ಗಂಟೆಗೆ ಆಸ್ಪತ್ರೆಯಿಂದ ಆಗಮಿಸಲಿದ್ದು, ಶ್ರೀಮಠದಲ್ಲಿ ಇಡಲಾಗುತ್ತದೆ. ಭಾನುವಾರ ಬೆಳಗ್ಗೆ 8ಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಬೆಳಗ್ಗೆ 9ಕ್ಕೆ ವಿಜಯಮಹಾಂತರ ಕರ್ತೃ ಗದ್ದುಗೆಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ಚಿತ್ತರಗಿ, ಇಳಕಲ್ ವಿಜಯಮಹಾಂತೇಶ್ವರ ಮಠದ 19ನೇ ಪೀಠಾಧಿಪತಿಗಳಾಗಿದ್ದ ಸ್ವಾಮೀಜಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್​ ಪಡೆದಿದ್ದರು. ಬಸವಶ್ರೀ ಸೇರಿ ಕೆಲವು ಪ್ರಶಸ್ತಿ ಪುರಸ್ಕೃತರಾಗಿದ್ದರು.

By Suddi9

Leave a Reply

Your email address will not be published. Required fields are marked *