ವಿಟ್ಲ: ಮೇ 19ರಂದು ರಾತ್ರಿ ವಿಟ್ಲದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ವಿಜಯೋತ್ಸವದಲ್ಲಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಸೋಮವಾರ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮೊಹಮ್ಮದ್ ತಮಿನ್, ಅಬ್ದುಲ್ ರಹಿಮಾನ್, ಮೊಹಮ್ಮದ್ ಝಕರಿಯಾ, ಸುಲೈಮಾನ್, ನಿತಿನ್ ಹಾಗೂ ದಿನೇಶ್ ಎಂದು ಗುರುತಿಸಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಗೆ ಸಿದ್ಧತೆ ನಡೆಸುತ್ತಿದ್ದಂತೆ ಇತ್ತ ವಿಟ್ಲ ಪರಿಸರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೈಕಿನಲ್ಲಿ ವಿಜಯೋತ್ಸವ ಆಚರಿಸುತ್ತಾ ಅಲ್ಲಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುಸುವ ವೇಳೆ ಬಿಜೆಪಿಗೆ ಧಿಕ್ಕಾರ ಎಂದು ಘೋಷಂಣೆ ಕೂಗಿದ್ದು, ಈ ವೇಳೆ ಇತ್ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು. ಘಟನೆಯಲ್ಲಿ ಶರತ್ ಹಾಗೂ ಧನರಾಜ್ ಸೇರಿ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

