ಕುಂದಾಪುರ: ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಛಾಯಾ ಗ್ರಾಹಕ ದೀಪಕ್ (38) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಮೇ 22ರಂದು ರಾತ್ರಿ ಕುಂದಾಪುರದ ಕೋಣಿಯ ಹುಣ್ಸಿಕಟ್ಟೆ ಎಂಬಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ, ನೂತನವಾಗಿ ನಿರ್ಮಾಣಗೊಂಡಿದ್ದ ಸೇತುವೆಗೆ ಹಾಕಲಾಗಿದ್ದ ಸ್ಪೀಡ್ ಬ್ರೇಕರ್ ನ್ನು ಗಮನಿಸದೇ ವೇಗವಾಗಿ ಚಲಿಸಿದ ಕಾರಣ ಅವಘಡ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ದೀಪಕ್ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

