ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಗೆ ತಾಲೂಕಿನ ವಾಮದಪದವಿನ ಗಣೇಶ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜೇಶ್ ನಾಯ್ಕ್, ಧರ್ಮ ಹಾಗೂ ಸಂಸ್ಕೃ ತಿಯ ರಕ್ಷಣೆಯೇ ನನ್ನ ಮೊದಲ ಆದ್ಯತೆ. ಈ ಹಿಂದೆ ಪರಾಜಿತ ಅಭ್ಯರ್ಥಿಯಾಗಿದ್ದಾಗಲೂ ಕಾರ್ಯಕರ್ತರು ನೀಡಿದ ಪ್ರೀತಿ ವಿಶ್ವಾಸಕ್ಕೆ ಚಿರಋಣೀಯಾಗಿದ್ದೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರದ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಸಂಗಬೆಟ್ಟು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ರತ್ನಕುಮಾರ್ ಚೌಟ, ವಸಂತ ಕುಮಾರ್ ಅಣ್ಣಳಿಕೆ, ಸಂತೋಷ್ ರಾಯಿಬೆಟ್ಟು, ಹರೀಶ್ ಆಚಾರ್ಯ, ಪುರುಷೋತ್ತಮ ಶೆಟ್ಟಿ ವಾಮದಪದವು, ಚಂದ್ರಶೇಖರ ಶೆಟ್ಟಿ ಕುಮಂಗಿಲ, ಶಂಕರ ಶೆಟ್ಟಿ ಬೆದ್ರಮಾರ್, ಲಕ್ಷ್ಮೀನಾರಾಯಣ ಉಡುಪ, ಚಂದ್ರಶೇಖರ ಶೆಟ್ಟಿ ವಾಮದಪದವು, ದಿನೇಶ್ ಶೆಟ್ಟಿ ದಂಬೆದಾರ್, ಶ್ಯಾಮ್ ಪ್ರಸಾದ್ ಪೂಂಜ, ಗಂಗಾಧರ್ ಪೂಜಾರಿ ಮುಗೇರ, ಪ್ರಕಾಶ್ ಶೆಟ್ಟಿ, ಕರುಣಾಕರ, ಮೋಹನದಾಸ್ ಗಟ್ಟಿ, ವಿನೋದ್ ಪೂಜಾರಿ, ರಘುವೀರ್ ಭಟ್, ರೂಪೇಶ್ ಪೂಜಾರಿ, ಆಶಾ ಜಯರಾಮ ಶೆಟ್ಟಿ, ವಿನುತ ಉಪಸ್ಥಿತರಿದ್ದರು.

