ಪುತ್ತೂರು: ಶಿಕ್ಷಕರ ದಿನವನ್ನು ವಿವಿಧ ದಿನಗಳಲ್ಲಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗುವುದು ಸರಿಯಲ್ಲ. ಸೆ.5ರಂದೇ ಶಿಕ್ಷಕರ ದಿನವನ್ನು ಆಚರಿಸಬೇಕು ಎಂದು ಸಮನ್ವಯ ಅಧಿಕಾರಿ ವಿಷ್ಣು ಪ್ರಸಾದ್ ಸೂಚಿಸಿದ್ದಾರೆ.
ಇಲ್ಲಿನ ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಶಿಕ್ಷಕರ ದಿನವನ್ನು ಕೆಲವು ಶಾಲೆಗಳಲ್ಲಿ ನಿಗದಿತ ದಿನಗಳಲ್ಲಿ ಆಚರಿಸುತ್ತಿಲ್ಲ. ಪ್ರತಿ ವರ್ಷ ಎಲ್ಲ ಶಾಲೆಗಳಲ್ಲಿ ಸೆ. 5ರಂದೇ ಶಿಕ್ಷಕರ ದಿನವನ್ನು ಆಚರಿಸಬೇಕು. ಇದಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಲಿಕಾ ಸಮಯದಲ್ಲಿ ಮಕ್ಕಳಿಗೆ ಹಾಲು ವಿತರಿಸಬಾರದು. ಖರೀದಿ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರಲ್ಲದೆ, ಶಿಕ್ಷಣ ಇಲಾಖೆಯ ಶೈಕ್ಷಣಿಕ ಸಾಲಿನ ಸುತ್ತೋಲೆಯನ್ನು ವಿವರಿಸಿದರು..
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಉಪಸ್ಥಿತರಿದ್ದರು.

